ಬಂಟ್ವಾಳ: ಯುವ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್  ಇದರ ವತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿ ಸಿ ರೋಡ್ ಡಿವೈಡರ್ ಬಳಿ ಸಸಿ ನೆಡುವ ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.c54d96e7-cfdd-4a38-b3c0-7d3cca56cccd

ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ  ಇಬ್ರಾಹಿಂ ನವಾಝ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ , ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಬೇಬಿ ಕುಂದರ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ರಾದ ಪ್ರಶಾಂತ್ ಕುಲಾಲ್,ಬಂಟ್ವಾಳ ಎನ್ ಎಸ್ ಯು ಐ ಅಧ್ಯಕ್ಷರಾದ ವಿನಯ್ ಕುಮಾರ್ ಸಿಂದ್ಯಾ ಪ್ರಮುಖರಾದ ಮಾಜಿ ಬೂಡ ಅಧ್ಯಕ್ಷರಾದ ಸದಾಶಿವ ಬಂಗೇರ,ರೋಷನ್, ಇರ್ಷಾದ್, ಹರ್ಷದ್ ಮದಕ, ಗಣೇಶ್ ಪೂಂಜರ ಕೋಡಿ, ಪಾಣೆಮಂಗಳೂರು ಬ್ಲಾಕ್ ಕಾರ್ಯದರ್ಶಿ ಸಿದ್ದಿಕ್ ಸರವು, ಯುವ ಕಾಂಗ್ರೆಸ್ ಬ್ಲಾಕ್ ಸಮಿತಿ ಪದಾಧಿಕಾರಿಗಳಾದ ಬೂಯಾ ಶರೀಫ್, ಸಿರಾಜ್ ಮದಕ,ಜೈಸನ್ ಕ್ರಾಸ್ತಾ,ಗೀತೇಶ್ ಕರ್ಕೇರಾ,ನೌಫಲ್ ನೆಹರು ನಗರ, ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *