ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ವಿಭಾಗದ ಕಾನೂನು ಸಲಹೆಗಾರರಾಗಿ ಯುವ ವಕೀಲ ಎ.ಪಿ.ಮೊಂತೇರೊ ವಿಟ್ಲ ಅವರು ನೇಮಕಗೊಂಡಿದ್ದಾರೆ.
ಕೆಪಿಸಿಸಿ ಕಾರ್ಮಿಕ ಘಟಕದ ನಿರ್ದೇಶನ ದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಅವರ ಅನುಮೋದನೆ ಹಾಗೂ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುಧೀಫ್ ಕುಮಾರ್ ಶೆಟ್ಟಿ ಶಿಫಾರಸಿನಂತೆ ಮೇರೆಗೆ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಈ ನೇಮಕಾತಿ ಮಾಡಿದ್ದಾರೆ.
