ಬಂಟ್ವಾಳ : ತಾಲ್ಲೂಕಿನ ಇರ್ವತ್ತೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ‘ಶಾಲಾ ಪ್ರಾರಂಭೋತ್ಸವ’ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಪಿ.ಶೇಖರ್ ಉದ್ಘಾಟಿಸಿದರು. ಮುಖ್ಯಶಿಕ್ಷಕ ಸುನಿಲ್ ಸಿಕ್ವೇರಾ ಮತ್ತಿತರರು ಇದ್ದಾರೆ.
ಬಂಟ್ವಾಳ ಇಲ್ಲಿನ ಇರ್ವತ್ತೂರು ಸಮೀಪದ ಮೂಡುಪಡುಕೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ‘ಶಾಲಾ ಪ್ರಾರಂಭೋತ್ಸವ’ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಪಿ.ಶೇಖರ್ ಉದ್ಘಾಟಿಸಿದರು. ಸರ್ಕಾರದ ಕೋವಿಡ್ ಮಾರ್ಗಸೂಚಿ ಪಾಲಿಸುವುದರ ಜೊತೆಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಶಿಕ್ಷಕರು ಮತ್ತು ಮಕ್ಕಳ ಪೋಷಕರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಇದೇ ವೇಳೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಇವರ ಪುತ್ರ ಕೌಶಿಕ್ ನನ್ನು ಶಾಲೆಗೆ ಸೇರ್ಪಡೆಗೊಳಿಸಿದರು. ಪ್ರಮುಖರಾದ ಶಂಕರ ಶೆಟ್ಟಿ ಬೆದ್ರಮಾರು, ನಳಿನಿ ಶುಭ ಹಾರೈಸಿದರು. ಪ್ರಭಾರ ಮುಖ್ಯಶಿಕ್ಷಕ ಸುನಿಲ್ ಸಿಕ್ವೇರಾ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಶಿಕ್ಷಕಿ ವಸಂತಿ ಜಿ.ಕೆ.ಭಟ್ ವಂದಿಸಿದರು.
