ಶ್ರೀನಿವಾಸಪುರ : ತಾಲ್ಲೂಕು ಕಚೇರಿ ಮುಂದೆ ಮಂಗಳವಾರ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟದಕ ಅಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಪ್ರತಿಭಟನ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ , ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯ ಫಲವಾಗಿ , ಕೃಷಿಕರು , ಕೃಷಿ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರ ಬದುಕು ದುಸ್ತರವಾಗಿದೆ ಎಂದು ಹೇಳಿದರು.IMG-20210706-WA0144ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್ ಅವರಿಗೆ ನೀಡಿದರು . ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ , ಸಂಘಟನಾ ಕಾರ್ಯದರ್ಶಿ ಸೈಯದ್ ಫಾರೂಕ್ , ಮುಖಂಡರಾದ ಆರ್‌.ವೆಂಕಟೇಶ್ , ಜಿ.ಮಂಜುಳ , ಅಕ್ಕಲ್ , ನಾಗಭೂಷಣ , ರಾಧಾಕೃಷ್ಣ , ಶಿವಪ್ಪ ಇದ್ದರು.IMG-20210706-WA0145

By Suddi9

Leave a Reply

Your email address will not be published. Required fields are marked *