ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮೃತರನ್ನು ಮಂಚಿ ಗ್ರಾಮದ ಕಂಚಿಲ ನಿವಾಸಿ ಗಣೇಶ ನಾಯ್ಕ್ ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡು ಕರ್ಣಾಟಕ ಬ್ಯಾಂಕಿನ ಉದ್ಯೋಗಿಯಾಗಿದ್ದು, ಬುಧವಾರ ಬೆಳಿಗ್ಗೆ ಎಂದಿನಂತೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
