ಬಂಟ್ವಾಳ: ಕೃಷಿ ಸಂಸ್ಕೃತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಹಡಿಲು ಬಿದ್ದಿರುವ ಎಲ್ಲಾ ಗದ್ದೆಗಳನ್ನು ಸಾಗುವಳಿ ಮಾಡುವ ಮೂಲಕ ನಮ್ಮೂರಿನ ಗುಣಮಟ್ಟದ ಅಕ್ಕಿ ಸಿಗಬೇಕು  ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಇಲ್ಲಿನ  ಬರಿಮಾರು ಗ್ರಾಮದ ಪಠೇಲರ ಮನೆ ಹಡಿಲು ಗದ್ದೆಯಲ್ಲಿ ಸಾಗುವಳಿ ಆರಂಭಕ್ಕೆ ಚಾಲನೆ ನೀಡಿ  ಮಾತನಾಡಿದರು. ಮುಂದಿನ ಯುವ ಪೀಳಿಗೆಗೆ ಭತ್ತದ ಕೃಷಿ ಪರಿಚಯಿಸುವ ಕೆಲಸ ಆಗಬೇಕಾಗಿದೆ ಎಂದರು.FB_IMG_1625578858404ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬ್ಲಾಕ್ ಕಿಸಾನ್ ಘಟಕ ಅಧ್ಯಕ್ಷ ಸೋಮಶೇಖರ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ,  ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಮಾಜಿ  ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಕೊಳ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಬರಿಮಾರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ, ಪ್ರಮುಖರಾದ ಜಗದೀಶ್ ಜೈನ್, ಗುರುಪ್ರಸಾದ್ ಬಲ್ಯ, ಲಾರೆನ್ಸ್ ಪಿಂಟೋ ಮತ್ತಿತರರು ಇದ್ದರು. IMG-20210706-WA0113

By suddi9

Leave a Reply

Your email address will not be published. Required fields are marked *