ಕೈಕಂಬ : ಮಂಗಳೂರಿನ ‘ಸಂಘ ನಿಕೇತನ’ದಲ್ಲಿ ಶನಿವಾರ ನಡೆದ ಬಿಜೆಪಿ ಸಭೆಯಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮಕ್ಷಮದಲ್ಲಿ ಗುರುಪುರ ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಜಿ ಎಂ ಉದಯ ಭಟ್ ಮತ್ತು ಸಚಿನ್ ಅಡಪ ತಮ್ಮ ಬೆಂಬಲಿಗರೊಂದಿಗೆ ವಿದ್ಯುಕ್ತವಾಗಿ ಬಿಜೆಪಿ ಸೇರಿಕೊಂಡರು.gur-july-10-bjp-1ಸಭೆಯಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ನಗರ ಉತ್ತರ ಬಿಜೆಪಿ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಹಾಗೂ ಮನಪಾ ಕಾರ್ಪೊರೇಟರ್‌ಗಳು, ಬಿಜೆಪಿ ಪ್ರಮುಖರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.gur-july-10-bjp-2ಹಿಂದಿನ ಸಾಲಿನಲ್ಲಿ ಗುರುಪುರ ಗ್ರಾಪಂ ಉಪಾಧ್ಯಕ್ಷರಾಗಿದ್ದ ಜಿ ಎಂ ಉದಯ ಭಟ್ ಹಾಲಿ ಸದಸ್ಯರಾಗಿದ್ದಾರೆ. ತಾಲೂಕು ಪಂಚಾಯತ್‌ನ ನಿಕಟಪೂರ್ವ ಸದಸ್ಯರಾಗಿದ್ದ ಸಚಿನ್ ಅಡಪ ಪ್ರಸಕ್ತ ಗುರುಪುರ ಗ್ರಾಪಂನ ಸದಸ್ಯರಾಗಿದ್ದಾರೆ. ಇವರಿಬ್ಬರೂ ಕಾಂಗ್ರೆಸ್‌ನಿಂದಲೇ ರಾಜಕೀಯ ಆರಂಭಿಸಿದ್ದರು.gur-july-10-bjp-3

By suddi9

Leave a Reply

Your email address will not be published. Required fields are marked *