ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರ ಪತಿ ಶುಕ್ರವಾರ ತಡ ರಾತ್ರಿ ವೇಳೆ ಆಸ್ಪತ್ರೆಗೆ ಬಂದು ಮಹಿಳಾ ವಾರ್ಡಿಗೆ ಹೋಗಲು ಅವಕಾಶ ನೀಡಿಲ್ಲ ಎಂದು ಆರೋಪಿಸಿ ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಲ್ಲದೆ ಜೀವಬೆದರಿಕೆ ಒಡ್ಡಿದ ಘಟನೆ ನಡೆದಿದೆ.
ಆರೋಪಿಯನ್ನು ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ ಅವರ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
