ಕೋಲಾರ: ಬಕ್ರೀದ್‌ಹಬ್ಬದ ಪ್ರಯುಕ್ತ ಒಂಟೆ/ಗೋವುಗಳ ಹತ್ಯೆ ಮಾಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಬೇಕೆಂದು ಹಾಗೂ ಮುಸ್ಲಿಂ ಸಮುದಾಯ ಮುಖಂಡರ ಸಭೆಯನ್ನು ಮಾಡಿ, ಅವರಲ್ಲಿ ಗೋಹತ್ಯೆ ಕಾನೂನುಗಳ ಬಗ್ಗೆ ತಿಳಿಸಿಕೊಡಬೇಕೆಂದು ನಗರ ಸಭೆ ಆಯುಕ್ತರಿಗೆ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿರವರು ಸೂಚಿಸಿದರು.PASHU ELAKE NEWS (1)ನಗರದ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಪಶುಪಾಲನಾ ಇಲಾಖೆ ಹಾಗೂ ಜಿಲ್ಲಾ ಪ್ರಾಣಿದಯಾ ಸಂಘದವರೊಂದಿಗೆ ಅನಧಿಕೃತವಾಗಿ ಒಂಟೆ/ಗೋವುಗಳ ಹತ್ಯೆತಡೆಗಟ್ಟಲು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಜುಲೈ ೨೧ ರಂದು ನಡೆಯುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರು ಕಡ್ಡಾಯವಾಗಿ ಒಂಟೆ/ಗೋವುಗಳನ್ನು ಹತ್ಯೆ ಮಾಡಬಾರದು ಇದು ಅಪರಾಧವಾಗಿರುತ್ತದೆ ಈ ಬಗ್ಗೆ ಸರ್ಕಾರದ ಕಾನೂನು ಜಾರಿಯಲ್ಲಿದ್ದು, ಪ್ರತಿಯೊಬ್ಬರು ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದಲ್ಲಿ ಕಾನೂನು ಪ್ರಕಾರಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಹಬ್ಬದ ಸಂದರ್ಭದಲ್ಲಿ ಹೊರರಾಜ್ಯಗಳಿಂದ ಮತ್ತು ಹೊರಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಾರೆ. ಇಂತಹ ಸಂದರ್ಭಗಳಲ್ಲಿ ಚೆಕ್‌ ಪೋಸ್ಟ್ಗಳಲ್ಲಿ ಕಡ್ಡಾಯವಾಗಿ ವಾಹನಗಳ ತಪಾಸಣೆ ನಡೆಸಬೇಕು ಹಾಗೂ ಈ ವೇಳೆ ಸಂರಕ್ಷಿಸಲ್ಪಡುವ ಗೋವುಗಳನ್ನು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಗೋಶಾಲೆಗೆ ಸೇರಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಪೊಲೀಸ್ ಹಾಗೂ ಆರ್.ಟಿ.ಒ ಅಧಿಕಾರಿಗಳಿಗೆ ಸೂಚಿಸಿದರು. ಹಬ್ಬದ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ನಗರಸಭೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಕ್ರಮವಹಿಸಬೇಕೆಂದು ತಿಳಿಸಿದರು.

ಕಾನೂನು ಬಾಹಿರವಾಗಿಯಾರಾದರೂಒಂಟೆ/ಗೋಹತ್ಯೆ ಮಾಡಿದ್ದು, ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ, ಪೊಲೀಸ್ ಹಾಗೂ ನಗರಸಭೆಯ ಸಹಾಯವಾಣಿಯ ದೂರವಾಣಿಗಳಿಗೆ ಮಾಹಿತಿಯನ್ನು ತಿಳಿಸಲು ಸೂಚಿಸಿದರು.

ಸಭೆಯಲ್ಲಿ ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಡಾ.ಎನ್‌ ಜಗದೀಶ್‌ಕುಮಾರ್, ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಅಪ್ಜಲ್‌ಪಾಷ, ಡಾ. ವಿಶ್ವನಾಥಎಸ್, ನಗರಸಭೆ ಪೌಯುಕ್ತರಾದ ಪ್ರಸಾದ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಮಾಲಿನ್ಯ ನಿಯಂತ್ರಣಾಧಿಕಾರಿಗಳು, ಆರ್.ಟಿ.ಒ, ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯಕೆ.ಎನ್‌ತ್ಯಾಗರಾಜು ಹಾಜರಿದ್ದರು.

By suddi9

Leave a Reply

Your email address will not be published. Required fields are marked *