ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಸಮೀಪದ ವಿವಾಹಿತ ಮಹಿಳೆಯನ್ನು ಅತ್ಯಾಚಾರ ಮಾಡಿ ಬಳಿಕ ಬೆದರಿಕೆ ಹಾಕಿದ ಆರೋಪದಲ್ಲಿ ಯುವಕನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
IMG-20210713-WA0081
ಆರೋಪಿ ಮುಹಮ್ಮದ್ ಅಯ್ಯೂಬ್ ಬಂಧಿತನಾಗಿದ್ದು, ಈತನು ತಲಪಾಡಿಯ ವಿವಾಹಿತ ಮಹಿಳೆ ಯನ್ನು ‌ ಇನ್ ಸ್ಟಾಗ್ರಾಂನಲ್ಲಿ ಪರಿಚಯಿಸಿಕೊಂಡು ಬಳಿಕ ಪ್ರೀತಿಯ ನಾಟಕವಾಡಿ ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದನ್ನು ಮಹಿಳೆ ನಿರಾಕರಿಸಿದರೂ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.  ಈಚೆಗೆ ಬಿ.ಸಿ.ರೋಡ್ ಗೆ ಬಂದಿದ್ದ ಮಹಿಳೆಯನ್ನು ತನ್ನ  ಕಾರಿನಲ್ಲಿ ಬಲವಂತವಾಗಿ ಕೂರಿಸಿ ಮಂಗಳೂರಿನಲ್ಲಿ ಸುತ್ತಾಡಿಸಿ  ಮೊಬೈಲ್ ನಲ್ಲಿ ಫೋಟೋ ತೆಗೆದು
 ಬಳಿಕ ತಲಪಾಡಿಯಲ್ಲಿ ಬಿಟ್ಟುಹೋಗಿದ್ದಾನೆ. ಆ ಬಳಿಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯಾರಲ್ಲೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *