ಗುಲ್ಬರ್ಗಾ: ಸರ್ಕಾರಿ ವೈದ್ಯರ ಸಾಮೂಹಿಕ ರಾಜಿನಾಮೆ ಬೆದರಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ವೈದ್ಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಸರ್ಕಾರಿ ವೈದ್ಯರ ಮುಷ್ಕರಕ್ಕೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯು.ಟಿ ಖಾದರ್ ಅವರು, ವೈದ್ಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

khader

ಇಂದು ಗುಲ್ಬರ್ಗಾದಲ್ಲಿ ಮಾತನಾಡಿದ ಯು.ಟಿ ಖಾದರ್, ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಸರ್ಕಾರಿ ವೈದ್ಯರು ಸರ್ಕಾರಕ್ಕೆ ಮನವಿ ಮಾಡಿದ್ದು, ಅದರಂತೆ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ ಎಂದರು. ಇದೇ ವೇಳೆ, ವೈದ್ಯರು ರಾಜಿನಾಮೆ ನೀಡುವ ನಿರ್ಧಾರವನ್ನ ಕೈಬಿಡಬೇಕು ಇಲ್ಲದೆ ಹಠಮಾರಿತನ ಪ್ರದರ್ಶಿಸಿದರೆ ಪರ್ಯಾಯ ಕ್ರಮಕ್ಕೂ ಸರ್ಕಾರ ಸಿದ್ಧವಿದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸಿ ಇಲ್ಲದಿದ್ದರೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ವೈದ್ಯರು ಸೇರಿ ಅಕ್ಟೋಬರ್ 27ರಂದು ಸಾಮೂಹಿಕ ರಾಜಿನಾಮೆ ನೀಡುವುದಾಗಿ ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷ ಡಾ.ವೀರಭದ್ರಯ್ಯ ಬೆದರಿಕೆ ಹಾಕಿದ್ದರು. ಈ ಬೆದರಿಕೆಗೆ ಮಣಿದಿರುವ ಸರ್ಕಾರ ವೈದ್ಯರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದೆ.

By Suddi9

Leave a Reply

Your email address will not be published. Required fields are marked *