ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಶುಕ್ರವಾರ ಶಿರ್ತಾಡಿ ಗ್ರಾಮ ಪಂಚಾಯಿತಿಯ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು.
ಪಂಚಾಯಿತಿ ಸಿಬಂದಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ದಾನಿಗಳನ್ನು ಗೌರವಿಸಲಾಯಿತು. ಪಂಚಾಯಿತಿ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದರು.
ಉಪಾಧ್ಯಕ್ಷೆ ಶಶಿಕಲಾ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಮಂಡಲ ಪ್ರಧಾನರಾದ ಸಂಪತ್ ಸಾಮ್ರಾಜ್ಯ, ತಾಪಂ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಉದ್ಯಮಿ ಸತೀಶ್ ಶೆಟ್ಟಿ, ಸಹಾಯಕ ಎಂಜಿನಿಯರ್ ಜಗದೀಶ್ ಶೇಟ್, ಪಂ. ಕಾರ್ಯದರ್ಶಿ ಶೇಖರ್ ಮತ್ತಿತರರು ಉಪಸ್ಥಿತರಿದ್ದರು. ಪಂ. ಅಭಿವೃದ್ಧಿ ಅಧಿಕಾರಿ ವೆಂಕಟ್ರಮಣ ಪ್ರಕಾಶ್ ನಿರೂಪಿಸಿದರು. ಉಪನ್ಯಾಸಕ ಸುದೀಪ್ ಬುನ್ನನ್ ನಿರೂಪಿಸಿದರು. ಪಂಚಾಯಿತಿ ಸಿಬಂದಿ ಅಕ್ಷಯ್ ವಂದಿಸಿದರು.
