Published On: Sat, Jul 17th, 2021

ದ.ಕ ಕೆಡಬ್ಲ್ಯೂಜೆಎಸ್‌ನಿಂದ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಪತ್ರಕರ್ತರ ಸಮಾಜಮುಖಿ ಕಾರ್ಯ ಶ್ಲಾಘನೀಯ : ಪ್ರಭಾಕರ ಶರ್ಮ

ಮುಂಬಯಿ : ಪತ್ರಕರ್ತರ ಸಂಘ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳು ಮಾದರಿ ಆಗಿವೆ. ಕುತ್ಲೂರು ಮತ್ತು ಕೊಂಬಾರುನಲ್ಲಿ ಬರೇ ಗ್ರಾಮ ವಾಸ್ತವ್ಯ ಮಾಡದೆ ಅಷ್ಟಕ್ಕೇ ಸೀಮಿತಗೊಳಿಸದೆ ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಿ ಶಾಲೆಯ ಅಭಿವೃದ್ಧಿಗೆ ತಮ್ಮಿಂದಾದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ. ಪಕತ್ರಕರ್ತರು ಕೇವಲ ವರದಿ ಮಾಡುವುದಕ್ಕಷ್ಟೇ ಸೀಮಿತವಾಗಿಲ್ಲ ಎಂಬುದನ್ನು ದ.ಕ ಪತ್ರಕರ್ತರು ತೋರಿಸಿಕೊಟ್ಟಿದ್ದಾರೆ. ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಗುರುತಿಸಬೇಕಾದ ಅಂಶ ಎಂದವರು ಹೇಳಿದ ಅವರು. ದ.ಕ. ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಕೂಡ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪ್ರಸ್ತುತ ರಕ್ತದ ಸಂಗ್ರಹ ಕಡಿಮೆ ಇದ್ದು, ಇದನ್ನು ಹೆಚ್ಚಿಸುವ ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ  ಎಸ್.ಎ ಪ್ರಭಾಕರ ಶರ್ಮ ತಿಳಿಸಿದರು.Press Club (KWJS) M'lore Note Book 1ಮಂಗಳೂರು ಅಲ್ಲಿನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ಕೆಡಬ್ಲ್ಯೂಜೆಎಸ್‌) ಇಂದಿಲ್ಲಿ ಶನಿವಾರ ಉರ್ವಾ ಲೇಡಿಹಿಲ್ ಇಲ್ಲಿನ ಪ್ರೆಸ್‌ಕ್ಲಬ್ ಸಭಾಗೃಹದಲ್ಲಿ ಆಯೋಜಿಸಿದ್ದ ಟಿಪ್ಪಣಿ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಾಂಕೇತಿಕವಾಗಿ ನೋಟ್ ಬುಕ್ ವಿತರಿಸಿ ಶರ್ಮ ಮಾತನಾಡಿದದರು.Press Club (KWJS) M'lore Note Book 4ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮಾತನಾಡಿ, ಪತ್ರಕರ್ತರ ಗ್ರಾಮವಾಸ್ತವ್ಯದಿಂದಾಗಿ ಈಗ ತಮ್ಮೂರಿನ ಚಿತ್ರಣವೇ ಬದಲಾಗಿದೆ. ಗ್ರಾಮ ವಾಸ್ತವ್ಯದ ಸಂದರ್ಭ ಊರವರಿಂದ ಬಂದ ೧೬೮ ಮನವಿಗಳ ಪೈಕಿ ಈಗಾಗಲೇ ೧೨೦ ಮನವಿಗಳಿಗೆ ಸ್ಪಂದನೆ ಸಿಕ್ಕಿದೆ. ಕಂಪ್ಯೂಟರ್, ಶಾಲಾ ಆವರಣ ಗೋಡೆ ನಿರ್ಮಾಣ, ಪುಸ್ತಕ ವಿತರಣೆ ಹೀಗೆ ಹಲವು ರೀತಿಯಲ್ಲಿ ಪತ್ರಕರ್ತರ ಸಂಘ ನೆರವಾಗಿದೆ ಎಂದವರು ಶ್ಲಾಸಿದರು.Press Club (KWJS) M'lore Note Book 3ದ.ಕ ಕೆಡಬ್ಲ್ಯೂಜೆಎಸ್‌ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ರಾಜ್ಯ ಘಟಕದ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ವೇದಿಕೆಯಲ್ಲಿದ್ದು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲುರು ಹಾಗೂ ಕೊಂಬಾರು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ನೀಡಲು ದಾನಿಗಳಿಂದ  ಸಹಾಯ ಮಾಡುವಂತೆ  ಮನವಿ ಮಾಡಿದಾಗ ತಕ್ಷಣವೇ ಸ್ಪಂದಿಸಿದ ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ದಾನಿಗಳಾದ  ಆಲ್ವಿನ್ ಸಿಕ್ವೆರಾ (ಗರ್ಗಾಡಿ ಬೆಳ್ತಂಗಡಿ) ಹಾಗೂ ಶಶಿಧರ್  ಬಿ.ಶೆಟ್ಟಿ ಬರೋಡ ಅವರಿಗೆ ಕೃತಜ್ಞತೆ ಹಾಗೂ ಅಭಿನಂದನೆ ಸಲ್ಲಿಸಿದರು .Press Club (KWJS) M'lore Note Book 6ದ.ಕ ಕೆಡಬ್ಲ್ಯೂಜೆಎಸ್‌ ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಡಿ.ಪಳ್ಳಿ ವಂದಿಸಿದರು ಸಮಾರಂಭದಲ್ಲಿ ಏಷ್ಯನ್ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಮದನ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಮುಲ್ಕಿ ವಲಯದ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಸ್ವಾಗತಿಸಿದರು. ಹರೀಶ್ ಮೋಟುಕಾನ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter