Published On: Sat, Jul 17th, 2021

ಸಂಸದರಿಂದ “ಸ್ವಚ್ಛ ವಾಹಿನಿ ” ತ್ಯಾಜ್ಯ ಸಂಗ್ರಹಣಾ ವಾಹನ ಗಳ ಕೀಲಿ ಕೈ ಹಸ್ತಾಂತರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅವರಣದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮಗಳಲ್ಲಿ ವೈಜ್ಞಾನಿಕವಾಗಿ ಘನತ್ಯಾಜ್ಯ ನಿರ್ವಹಣೆ ಮಾಡುವ ಉದ್ದೇಶದಿಂದ ಬೆಳ್ತಂಗಡಿ ತಾಲೂಕಿನ ಅರಸಿಮಕ್ಕಿ, ಇಳಂತಿಲ, ಬಳಂಜ ಮತ್ತು ಬಂಟ್ವಾಳ ತಾಲೂಕಿನ ನರಿಕೊಂಬು, ಕೇಪು, ಪೆರುವಾಯಿ ಹಾಗೂ ಪುಣಚ ಗ್ರಾಮ ಪಂಚಾಯತ್‌ಗಳಿಗೆ ಖರೀದಿಸಲಾದ “ಸ್ವಚ್ಛ ವಾಹಿನಿ “( ತ್ಯಾಜ್ಯ ಸಂಗ್ರಹಣಾ ವಾಹನ ) ಗಳ ಕೀಲಿ ಕೈಯನ್ನು  ಸಂಸದ  ನಳಿನ್ ಕುಮಾರ್ ಕಟೀಲ್ ಅವರು ಪಂಚಾಯತ್‌ಗಳ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹಸ್ತಾಂತರಿಸಿದರು.260cda0f-ac59-4589-9633-30b28fa9c35e

ಈ ಸಂಧರ್ಭದಲ್ಲಿ ಬಂಟ್ವಳ ಶಾಸಕ ರಾಜೇಶ್ ನಾಯ್ಕ್  ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ ) ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter