ಬೆಂಗಳೂರು:  2021ರ ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿದ್ದು, ಜಯಕಿರಣ ಪತ್ರಿಕೆಯ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆಯಾಗಿದ್ದಾರೆ.

Bala Jagannath Shetty 2A
ಪತ್ರಿಕೋದ್ಯಮದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಇವರು ಜಯಕಿರಣದಲ್ಲಿ ಕಳೆದ 16 ವರ್ಷಗಳಿಂದ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2018 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, 2008ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ಮು ಪಡೆದುಕೊಂಡಿದ್ದು, ಇದೀಗ ಜಗನ್ನಾಥ ಶೆಟ್ಟಿ ಬಾಳ ಇವರು ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾವಳಿ (5) ರ ನಿಯಮ 5.1 ರ ಪ್ರಕಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ಕೆ. ಸದಾಶಿವ ಶೆಣೈ ಅವರನ್ನು ನೇಮಕ ಮಾಡಲಾಗಿದ್ದು, ಗೋಪಾಲ ಸಿಂಗಪ್ಪಯ್ಯ ಯಡಗೆರೆ, ಕೆ.ಕೆ. ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೊಡ್ಲಿ ಗುರುರಾಜ್, ಶಿವನಾಂದ ತಗಡೂರು, ಸಿ.ಕೆ. ಮಹೇಂದರ್, ಜಗನ್ನಾಥ ಬಾಳ, ದೇವೇಂದ್ರಪ್ಪ ಕಪನೂರು, ಕೆ.ವಿ. ಶಿವಕುಮಾರ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

By suddi9

Leave a Reply

Your email address will not be published. Required fields are marked *