ಮೂಡುಬಿದಿರೆ :ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್‌ಗೆ ಅನುಮೋದನೆ ನೀಡುವಲ್ಲಿ ಗಂಭೀರ ಲೋಪದೋಷಗಳಾಗಿವೆ. ಹೀಗಾಗಿ ಈ ಟೆಂಡರ್‌ಗೆ ಅನುಮೋದನೆಯನ್ನು ತಡೆಹಿಡಿಯಬೇಕೆಂದು ಸೋಮವಾರ ನಡೆದ ಸಾಮಾನ್ಯಸಭೆಯಲ್ಲಿ ವಿಪಕ್ಷ ಸದಸ್ಯರು ಆಗ್ರಹಿಸಿದರು.
ಪುರಸಭಾಧ್ಯಕ್ಷ ಪ್ರಸಾದ್‌ಕುಮಾರ್ ಅಧ್ಯಕ್ಷತೆಯಲ್ಲಿ ಪುರಸಭಾ ಭವನದಲ್ಲಿ ಸಭೆನಡೆಯಿತು.
ಸುರೇಶ್ ಕೋಟ್ಯಾನ್ ಅವರು ಮಾತನಾಡಿ ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ರೂ 200 ಲಕ್ಷ ಮಂಜೂರಾಗಿದ್ದು ವಿವಿಧ ಕಾಮಗಾರಿಗಳಿಗೆ ಈ ಟೆಂಡರ್ ಕರೆಯಲಾಗಿದ್ದು ಗುತ್ತಿಗೆದಾರ ಪ್ರವೀಣ್ ಕುಮಾರ್ ಎಂಬವರಿಗೆ ಟೆಂಡರ್‌ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅನುಮೋದನೆ ದೊರಕಿದೆ ಈ ಅನುಮೋದನೆಯನ್ನು ಮರುಪರಿಶೀಲಿಸುವಂತೆ ದೂರು ಮತ್ತು ಆಕ್ಷೇಪಣೆ ನೀಡಲಾಗಿದೆ. ಪ್ರವೀಣ್ ಅವರ ಟೆಂಡರ್ ಮೊತ್ತಕ್ಕಿಂತಲೂ ಕಡಿಮೆ ಮೊತ್ತದಲ್ಲಿ ಕಾಮಗಾರಿ ನಡೆಸುತ್ತೇವೆ ಎಂದು ಅಧಿಕೃತವಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ತಿಳಿಸಿದ್ದರೂ ಬೇರೆಯವರಿಗೆ ನೀಡದಿರುವುದರ ಬಗ್ಗೆ ತನಿಖೆಗೆ ಒತ್ತಾಯಿಸಿದರು.
ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರು, ಎಂಜಿನಿಯರ್ ಪದ್ಮನಾಭ, ಮೆನೇಜರ್ ಗೋಪಾಲ್ ನಾಯ್ಕ್, ಪರಿಸರ ಅಭಿಯಂತರೆ ಶಿಲ್ಪಾ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
