ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ರೆಡ್ ಕ್ರಾಸ್ ಸಂಸ್ಥೆ, ದ.ಕ.ಜಿಲ್ಲಾ ಸವಿತಾ ಸಮಾಜ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಉರ್ವಸ್ಟೋರ್ ತುಳು ಭವನದಲ್ಲಿ ಕ್ಷೌರಿಕ ಸಮಾಜದ ಬಂಧುಗಳಿಗೆ ಕೋವಿಶೀಲ್ಡ್ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಉದ್ಘಾಟಿಸಿದರು. ರೆಡ್ ಕ್ರಾಸ್ ಸಂಸ್ಥೆಯ ಡಾ. ಶಾಂತಾರಾಮ ಶೆಟ್ಟಿ, ಆರೋಗ್ಯಾಧಿಕಾರಿ ಡಾ.ರಾಜೇಶ್, ಪತ್ರಕರ್ತ ರವೀಂದ್ರ ಶೆಟ್ಟಿ ದ.ಕ.ಜಿಲ್ಲಾ ಸವಿತಾ ಸಮಾಜ ಜಿಲ್ಲಾಧ್ಯಕ್ಷ ಅನಂಧ ಭಂಡಾರಿ ಹೊಸಬೆಟ್ಟು, ಪ್ರಧಾನ ಕಾರ್ಯದರ್ಶಿ ವಸಂತ ಎಂ. ಬೆಳ್ಳೂರು, ಮಂಗಳೂರು ತಾಲೂಕು ಸವಿತಾ ಸಮಾಜ ಅಧ್ಯಕ್ಷ ಸಂಜಯ ಮಹಾಲೆ ಮೊದಲಾದವರು ಉಪಸ್ಥಿತರಿದ್ದರು.
