ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಇಂದು ಸಂಜೆ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ಮುಖ್ಯಮಂತ್ರಿ ಹುದ್ದೆಗೆ ನೇಮಕ ಮಾಡಲಾಗಿದೆ.

ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ನಗರದ ಕ್ಯಾಪಿಟಲ್ ಹೋಟೇಲ್ ನಲ್ಲಿ ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ಸಿ ಎಂ ಹುದ್ದೆಗೆ ನೇಮಕ ಮಾಡಲಾಗಿದೆ.

