ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಗ್ಗೆ ಏಳು ಮಂದಿ ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಆಟೋ ರಿಕ್ಷಾ  ಪಲ್ಟಿಯಾಗಿ ಓರ್ವ ಸಾವನಪ್ಪಿರುವ ಘಟನೆ  ನಡೆದಿದೆ.WhatsApp Image 2021-07-28 at 2.47.14 PM

ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85)ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡ ಪರಿಣಾಮ ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಅಲ್ಪಸ್ವಲ್ಪ ಗಾಯಗೊಂಡ ಉಳಿದವರನ್ನು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕರೆತರುವ ವೇಳೆ ಅಟೋರಿಕ್ಷವು ಪರಿಯಪಾದೆ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.

By suddi9

Leave a Reply

Your email address will not be published. Required fields are marked *