ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ದೆಹಲಿ ಪ್ರವಾಸದಲ್ಲಿದ್ದು  ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.jghjjಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ  ಕೃತಜ್ಞತೆ ಸಲ್ಲಿಸಿದ್ದಾರೆ. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿ ಮೋದಿ ಅವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅಮಿತ್ ಶಾ ಕೊಟ್ಟ ಎಚ್ಚರಿಕೆ ಏನು?
ಸಿಎಂ ಬೊಮ್ಮಾಯಿ ಅವರಿಗೆ ಎಚ್ಚರಿಕೆ ಕೊಟ್ಟ ಸಮಿತ್ ಶಾ, ಇದೊಂದು ರೀತಿಯಲ್ಲಿ ಪರೀಕ್ಷೆಯ ಸಮಯ. ಹೀಗಾಗಿ ಸರಿಯಾಗಿ ಕೆಲಸ ಮಾಡಬೇಕು ಎಂದು ಎಚ್ಚರಿಸಿದ್ದಾರೆ. ಅದಕ್ಕೆ ಉತ್ತರಿಸಿರುವ ಮುಖ್ಯಮಂತ್ರಿ ಅವರು ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುವ ಭರವಸೆಯನ್ನು ಅಮಿತ್ ಶಾ ಅವರಿಗೆ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳ ಸಚಿವಾಲಯ ಮಾಹಿತಿ ಕೊಟ್ಟಿದೆ.

By suddi9

Leave a Reply

Your email address will not be published. Required fields are marked *