ಬಂಟ್ವಾಳ:ಇಲ್ಲಿನ ಇರ್ವತ್ತೂರು ಸಮೀಪದ ಮೂಡುಪಡುಕೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ‘ಗುರುಭ್ಯೋ ನಮಃ’ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ವಸಂತಿ ಜಿ.ಕೆ.ಭಟ್ ಇವರನ್ನು ಸನ್ಮಾನಿಸಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ಇರ್ವತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಪಿ.ಶೇಖರ್ ಶುಭ ಹಾರೈಸಿದರು.
ಉಪಾಧ್ಯಕ್ಷೆ ಹರಿಣಾಕ್ಷಿ, ಸದಸ್ಯರಾದ ಪ್ರಶಾಂತ ಜೈನ್, ದಯಾನಂದ, ಸುಧೀಂದ್ರ ಶೆಟ್ಟಿ, ಶುಭಕರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಪ್ರಮುಖರಾದ ರಾಜೀವ ಶೆಟ್ಟಿ ಎಡ್ತೂರು, ಶಂಕರ ಶೆಟ್ಟಿ ಬೆದ್ರಮಾರ್ ಮತ್ತಿತರರು ಇದ್ದರು.ಪ್ರಭಾರ ಮುಖ್ಯಶಿಕ್ಷಕ ಸುನಿಲ್ ಸಿಕ್ವೇರಾ ಸ್ವಾಗತಿಸಿ, ಸಂಧ್ಯಾ ವಂದಿಸಿದರು. ಶಿಕ್ಷಕ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.
