ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಣೇಶ್ ಹನುಮಂತಪ್ಪ ವೀರಪುರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ಸಾಧನೆ ಮಾಡಿದ್ದಾನೆ.WhatsApp Image 2021-08-10 at 2.57.23 PMಮೂಲತಃ ಬಾಗಲಕೋಟೆಯ ಇಳಕಲ್ಲ್ನ ಗಣೇಶ್, ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಕಳೆದ 5 ವರ್ಷದಿಂದ ಉಚಿತ ಶಿಕ್ಷಣ ಪಡೆಯುತ್ತಿದ್ದಾನೆ. ಈತ ಹನುಮಂತಪ್ಪ-ಯಶೋಧ ದಂಪತಿಯ ಪುತ್ರ.

625 ಅಂಕದ ನಿರೀಕ್ಷೆ ಇರಲಿಲ್ಲ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡಿಕೊಳ್ಳುತ್ತೇನೆ. ವೈದ್ಯನಾಗುವ ಕನಸಿದೆ. ಆಳ್ವಾಸ್‌ನಲ್ಲಿ ಶಿಕ್ಷಣಕ್ಕೆ ಪೂರಕವಾದ ವ್ಯವಸ್ಥೆ ಕಲ್ಪಿಸಿದ್ದು, ನಿರಂತರ ಅಧ್ಯಯನದಿಂದ ಉತ್ತಮ ಅಂಕಪಡೆಯಲು ಸಾಧ್ಯವಾಗಿದೆ ಎಂದು ಗಣೇಶ್ ಅನಿಸಿಕೆ ವ್ಯಕ್ತಪಡಿಸಿದ್ದಾನೆ.

By suddi9

Leave a Reply

Your email address will not be published. Required fields are marked *