ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಇಂದಿರಾ ಕ್ಯಾಂಟಿನ್ ಗೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಕಾಂಗ್ರೆಸ್ ಮುಖಂಡರು ಬುಧವಾರ ಭೇಟಿ ನೀಡಿದರು.  ಬಿ.ಸಿ.ರೋಡು ಮಿನಿ ವಿಧಾನಸೌಧ ಬಳಿ ಕಳೆದ ಮೂರು ವರ್ಷಗಳ ಹಿಂದೆ ಆರಂಭಗೊಂಡ ಇಂದಿರಾ ಕ್ಯಾಂಟಿನ್ ನಲ್ಲಿ ಗುತ್ತಿಗೆ ಆಧಾರಿತ ನೌಕರರಿಗೆ ಕಳೆದ ನಾಲ್ಕೈದು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಕಳೆದ ಒಂದು ವಾರದಿಂದ ಕ್ಯಾಂಟಿನ್ ಬಾಗಿಲು ತೆರೆಯದೆ ಮುಚ್ಚಿಕೊಂಡಿದೆ. ಇದರಿಂದಾಗಿ ಇಲ್ಲಿನ ನೌಕರರಿಗೆ ಉದ್ಯೋಗ ನಷ್ಟದ ಜೊತೆಗೆ ಬಡವರು ಮತ್ತು ನಿರ್ಗತಿಕರು ಪ್ರತಿದಿನ ಹಸಿವಿನಿಂದ ಪರದಾಡುವಂತಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.11btl-Indiraಬಿ.ಸಿ.ರೋಡು ಇಂದಿರಾ ಕ್ಯಾಂಟಿನ್ ಗೆ ಕಾಂಗ್ರೆಸ್ ಮುಖಂಡರೊಂದಿಗೆ ಬುಧವಾರ ಭೇಟಿ ನೀಡಿ ಅವರು ಮಾತನಾಡಿದರು. ಇಂದಿರಾ ಕ್ಯಾಂಟಿನ್ ನೌಕರರ ಸಂಕಷ್ಟಕ್ಕೆ ಸ್ಪಂದಿಸಿ ಆಹಾರ ಕಿಟ್ ನೀಡುವುದಾಗಿ ಅವರು ಭರವಸೆ ನೀಡಿದರು. ಇಂದಿರಾ ಕ್ಯಾಂಟಿನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ. ಎಸ್. ಮೊಹಮ್ಮದ್, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪ್ರಮುಖರಾದ ಅನಿತಾ ಹೇಮನಾಥ್ ಶೆಟ್ಟಿ, ರೋಷನ್ ರೈ, ಕೆ.ಪದ್ಮನಾಭ ರೈ, ಜಯಂತಿ ವಿ.ಪೂಜಾರಿ, ಸಿದ್ಧಿಕ್ ಗುಡ್ಡೆಯಂಗಡಿ, ಮೊಹಮ್ಮದ್ ನಂದಾವರ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *