ಪೊಳಲಿ ಸರಕಾರಿ ಪ್ರೌಢಶಾಲೆಯಲ್ಲಿ ತಂಬಾಕು ನಿಷೇಧ ಕಾರ್ಯಕ್ರಮ
ಪೊಳಲಿ : ಸರಕಾರಿ ಪ್ರೌಢಶಾಲೆ ಪೊಳಲಿ ಆ.17 ರಂದು ಮಂಗಳವಾರ ತಂಬಾಕು ನಿಷೇಧ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾಕ್ಟರ್ ಹನುಮಂತಪ್ಪ ವಿದ್ಯಾರ್ಥಿಗಳಿಗೆ ತಂಬಾಕಿನ ದುಷ್ಪರಿಣಾಮದ ಬಗ್ಗೆ ಚಿತ್ರ ಸಹಿತವಾಗಿ ವಿವರಿಸಿದರು. ಶುಭ ತಂಬಾಕಿನ ವಿವಿಧ ರೂಪಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಉಪಯೋಗಿಸದಂತೆ ತಿಳಿ ಹೇಳಿದರು.ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ಭಟ್ ಸ್ವಾಗತಿಸಿದರು ಮತ್ತು ರಂಜಿತ ರಾಜೀವ ಟಿ ಧನ್ಯವಾದ ಸಲ್ಲಿಸಿದರು. ಕಾರ್ಯ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋದಿಸಲಾಯಿತು.