ಬಂಟ್ವಾಳ: ತಾಲೂಕು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಒಕ್ಕೂಟದ ಮಹಾ ಸಭೆಯು ಆಗಸ್ಟ್ 31ರಂದು ಬೆಳಗ್ಗೆ 10 ಗಂಟೆಗೆ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಶಾಲೆಯಲ್ಲಿ (ಶ್ರೀ ವೆಂಕಟರಮಣ ದೇವಸ್ಥಾನದ ಎದುರು) ನಡೆಯಲಿದೆ.

ಪ್ರಸಕ್ತ ಖಾಸಗಿ ಶಾಲೆಗಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ. ಬಂಟ್ವಾಳ ತಾಲೂಕಿಗೆ ಒಳಪಟ್ಟ ಎಲ್ಲಾ ಅನುದಾನ ರಹಿತ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ, ಸಂಚಾಲಕರು ಸಭೆಗೆ ಹಾಜರಾಗಿ ಉಪಯುಕ್ತ ಮಾಹಿತಿಗಳನ್ನು ಪಡೆಯಬೇಕಾಗಿ ಒಕ್ಕೂಟದ ಕಾರ್ಯದರ್ಶಿ ಕೆ.ಎನ್.ಗಂಗಾಧರ ಆಳ್ವ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *