ಬಂಟ್ವಾಳ: ತಾಲ್ಲೂಕಿನ ಉಳಿ ಗ್ರಾಮ ಪಂಚಾಯಿತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ವತಿಯಿಂದ ಶುಕ್ರವಾರ ಆರಂಭಗೊಂಡ ಉಚಿತ ಆಂಬುಲೆನ್ಸ್ ಸೇವೆಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು. ಉಳಿ ಗ್ರಾಮ ಪಂಚಾಯಿತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ವತಿಯಿಂದ ಶುಕ್ರವಾರ ಆರಂಭಗೊಂಡ ಉಚಿತ ಆಂಬುಲೆನ್ಸ್ ಸೇವೆಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.
ಬಂಟ್ವಾಳ ತಾಲ್ಲೂಕಿನ ಪ್ರತೀ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಿ ಅತ್ಯಾಧುನಿಕ ತಂತ್ರಜ್ಞಾನ ಸಹಿತ ಗ್ರಾಮಿಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ಶ್ರಮಿಸುತ್ತಿರುವುದಾಗಿ ಅವರು ತಿಳಿಸಿದರು. ಹಿರಿಯ ವೈದ್ಯ ಡಾ.ಕೆ.ಜಿ.ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಟ್ವಾಳದಲ್ಲಿ ಸಂಚಾರಿ ಐಸಿಯು ಬಸ್ ಸೇವೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜನೌಷಧಿ ಕೇಂದ್ರ ಜನತೆಗೆ ಹತ್ತಿರವಾಗಿದೆ ಎಂದರು.
ದೇವಳದ ಅಧ್ಯಕ್ಷ ವಿಠಲರಾಜ್ ಬರ್ಕಟ, ಬೂಡ ಆದ್ಯಕ್ಷ ಬಿ.ದೇವದಾಸ ಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಮೈರ, ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ಸದಸ್ಯರಾದ ವಸಂತ ಸಾಲಿಯಾನ್, ಚೇತನ್ ಪೂಜಾರಿ, ಸಂಜೀವ ಗೌಡ, ರೇವತಿ, ಗುಲಾಬಿ, ಶಾಂತ, ವಿಶಾಲಾಕ್ಷಿ, ರಕ್ಷಿತಾ, ಶಾರದ, ಕಕ್ಯಬೀಡು ಕ್ಷೇತ್ರದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ.ಸತ್ಯಶಂಕರ್ ಶೆಟ್ಟಿ, ಉಳಿ ಸಹಕಾರಿ ಬ್ಯಾಂಕ್ ನಿರ್ದೇಶಕ ರಂಜಿತ್ ಮೈರ, ಪ್ರಮುಖರಾದ ಗಣೇಶ್ ಕೋಗುಜೆ, ಡೀಕಯ್ಯ ಪೂಜಾರಿ ಮತ್ತಿತರರು ಇದ್ದರು. ಇದೇ ವೇಳೆ ಉಪ ತಹಶೀಲ್ದಾರ್ ನವೀನ್ ಬೆಂಜನಪದವು ಇವರನ್ನು ಅಭಿನಂದಿಸಲಾಯಿತು.
