Published On: Mon, Sep 13th, 2021

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ, ಮುಖ್ಯಮಂತ್ರಿ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.WhatsApp Image 2021-09-13 at 4.37.35 PM“ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ ನೋವಿನ ವೇಳೆಯಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಪ್ರಾರ್ಥನೆ ಮತ್ತು ಸಂತಾಪಗಳನ್ನು ಸೂಚಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ”

ನರೇಂದ್ರ ಮೋದಿ – ಪ್ರಧಾನ ಮಂತ್ರಿ

”ರಾಜ್ಯಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಆಸ್ಕರ್ ಫರ್ನಾಂಡಿಸ್ ರವರು ಇಂದು ನಮ್ಮನ್ನೆಲ್ಲ ಅಗಲಿರುವುದು ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲೆಂದು ಕೋರುತ್ತೇನೆ. ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ಕರುಣಿಸಲೆಂದು ಪ್ರಾರ್ಥಿಸುತ್ತೇನೆ”

ಬಸವರಾಜ ಬೊಮ್ಮಾಯಿ- ಮುಖ್ಯಮಂತ್ರಿ

”ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು. ಆಸ್ಕರ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ”

ಸಿದ್ದರಾಮಯ್ಯ, – ಪ್ರತಿಪಕ್ಷ ನಾಯಕ

”ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು, ಸರಳ ಸಜ್ಜನ ನಾಯಕರಾಗಿ ಗುರುತಿಸಿಕೊಂಡಿದ್ದರು. ದೇವರು ಅವರಿಗೆ ಸದ್ಗತಿ ನೀಡಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ”

ಬಿ.ಎಸ್ ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ

ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ಆಸ್ಕರ್ ಫರ್ನಾಂಡೀಸ್ ಅವರು ಇಹಲೋಕ ತ್ಯಜಿಸಿರುವುದು ಮನಸ್ಸಿಗೆ ತೀವ್ರ ನೋವನ್ನುಂಟುಮಾಡಿದೆ. ದೇಶಕ್ಕಾಗಿ ಮತ್ತು ಪಕ್ಷಕ್ಕಾಗಿ ಅಪಾರ ಸೇವೆ ಸಲ್ಲಿಸಿದ ಶ್ರೀಯುತರು, ತಮ್ಮ ದೂರದೃಷ್ಟಿ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳಿಂದಾಗಿ ಜನಮಾನಸದಲ್ಲಿಮಾಜಿ ಕೇಂದ್ರ ಸಚಿವರು, ಕಾಂಗ್ರೆಸ್ ಹಿರಿಯ ಮುಖಂಡರಾದ ಶ್ರೀ ಆಸ್ಕರ್ ಪರ್ನಾಂಡಿಸ್ ರವರು ನಿಧನರಾದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ನಾಡಿನಾದ್ಯಂತ ಇರುವ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ

ಎಚ್. ಡಿ ದೇವೇಗೌಡ – ಮಾಜಿ ಪ್ರಧಾನಿ

ನಮ್ಮ ನಾಡಿನ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರು, ನನ್ನ ಆಪ್ತರೂ ಆಗಿದ್ದ ಆಸ್ಕರ್ ಫರ್ನಾಂಡೀಸ್ ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ಕೆಲ ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೇನು ಗುಣಮುಖರಾಗಿ ಮನೆಗೆ ಮರಳುತ್ತಾರೆ ಎನ್ನುವ ಹೊತ್ತಿನಲ್ಲಿ ಈ ಆಘಾತದ ಸುದ್ದಿ ಬಂದಿದೆ. ಎಚ್.ಡಿ ಕುಮಾರಸ್ವಾಮಿ- ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter