ಬಂಟ್ವಾಳ: ಇಲ್ಲಿನ ನಾವೂರು ಗ್ರಾಮದ ಪೊರ್ಕಡೆ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಗೋಣಿ ಚೀಲದಲ್ಲಿ ತುಂಬಿ ಮಾರಾಟ ಮಾಡುತ್ತಿದ್ದ ಅಡ್ಡೆಗೆ ತಹಶೀಲ್ದಾರ್ ರಶ್ಮಿ ಎಸ್. ನೇತೃತ್ವದ ತಂಡ ಶುಕ್ರವಾರ ದಾಳಿ ನಡೆಸಿದೆ.
ಅಕ್ರಮ ಮರಳು ದಾಸ್ತಾನು ಮತ್ತು ಮರಳುಗಾರಿಕೆಗೆ ಉಪಯೋಗಿಸುತ್ತಿದ್ದ ಹಲವು ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದು, ಕಂದಾಯ ನಿರೀಕ್ಷಕ ನವೀನ ಬೆಂಜನಪದವು, ಪಿಡಿಒ ಸುಧಾಮಣಿ, ಕಾರ್ಯದರ್ಶಿ ವಸಂತ ಪೂಜಾರಿ, ಗ್ರಾಮ ಲೆಕ್ಕಿಗ ಕುಮಾರ್, ಸಹಾಯಕ ಶಿವಪ್ರಸಾದ್, ಸಂದೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
