ಬಂಟ್ವಾಳ: ರಾಜ್ಯದಲ್ಲಿ ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳ ತೆರವುಗೊಳಿಸುತ್ತಿರುವುದನ್ನು ಖಂಡಿಸಿ ಇಲ್ಲಿ. ಬಿ.ಸಿ.ರೋಡು ರಕ್ತೇಶ್ವರಿ ದೇವಿ ದೇವಸ್ಥಾನ ಬಳಿ ಇದೇ ೧೮ರಂದು ಬೆಳಿಗ್ಗೆ ೧೦ ಗಂಟೆಗೆ ಪ್ರತಿಭಟನೆ ನಡೆಯಲಿದೆ.
ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆಯುವ ಈ ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
