ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಎಸ್ ಸಿ ಡಿಸಿಸಿ ಬ್ಯಾಂಕ್ ವತಿಯಿಂದ ಆರಂಭಗೊಂಡ ಎಟಿಎಂ ಸೌಲಭ್ಯಕ್ಕೆ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಸೋಮವಾರ ಚಾಲನೆ ನೀಡಿದರು.20btl-ATMರಾಜ್ಯದಲ್ಲಿ ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಕಳೆದ ಹಲವು ವರ್ಷಗಳಿಂದ ಜನ ಸಾಮಾನ್ಯರು ಸಹಿತ ಕೃಷಿಕರು ಮತ್ತು ಮಹಿಳೆಯರಲ್ಲಿ ಸ್ವಾವಲಂಬನೆ ಮೂಡಿಸುವಲ್ಲಿ ಬ್ಯಾಂಕ್ ಯಶಸ್ವು ಗಳಿಸಿದೆ. ಇದೀಗ ಗ್ರಾಹಕರಿಗೆ ವಿವಿಧೆಡೆ ಎಟಿಎಂ ಸೌಲಭ್ಯ ನೀಡುವ ಮೂಲಕ ಅತ್ಯುತ್ತಮ ಸೇವೆ ನೀಡುತ್ತಿದೆ ಎಂದು ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡು ಶಾಖೆಯ ಕೆಳ ಅಂತಸ್ತಿನಲ್ಲಿ ಅಳವಡಿಸಲಾದ ಎಟಿಎಂ ಸೌಲಭ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ, ಪಿಎಲ್‌ಡಿ ಬ್ಯಾಂಕ್ ರಾಜ್ಯ ನಿರ್ದೇಶಕ ರಾಜಶೇಖರ ಜೈನ್, ಸಹಕಾರ ಇಲಾಖೆ ಅಭಿವೃದ್ದಿ ಅಧಿಕಾರಿ ಗೋಪಾಲ್, ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಬಿ., ಜನರಲ್ ಮೆನೇಜರ್, ಗೋಪಿನಾಥ್, ನಿರ್ದೇಶಕರಾದ ಟಿ.ಜಿ. ರಾಜಾರಾಮ ಭಟ್, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಿ., ಮೋನಪ್ಪ ಶೆಟ್ಟಿ ಎಕ್ಕಾರು, ಶಾಖಾ ವ್ಯವಸ್ಥಾಪಕಿ ಸೌಮ್ಯ, ಜಿಲ್ಲಾ ಮೂರ್ತೆದಾರರ ಮಹಾಮಂಡಲ ಅಧ್ಯಕ್ಷ ಸಂಜೀವ ಪೂಜಾರಿ ಮೆಲ್ಕಾರ್ ಮತ್ತಿತರರು ಇದ್ದರು. ಅಮ್ಟಾಡಿ ಸಹಕಾರಿ ಸಂಘದ ಶಾಖಾ ವ್ಯವಸ್ಥಾಪಕ ದಿನೇಶ್ ಅಮೀನ್ ಸ್ವಾಗತಿಸಿ, ವಂದಿಸಿದರು.

By suddi9

Leave a Reply

Your email address will not be published. Required fields are marked *