ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ರೂ ೧ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಆರ್ ಎಸ್ ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಅವರು ಭಾನುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಸರ್ಕಾರವು ಜನತೆಗೆ ನೀಡುವ ವಿವಿಧ ಯೋಜನೆ ಮತ್ತು ಸೌಲಭ್ಯಗಳು ಸಹಕಾರಿ ಕ್ಷೇತ್ರದ ಮೂಲಕ ತಳ ಮಟ್ಟದ ಜನತೆಗೆ ತ್ವರಿತವಾಗಿ ತಲುಪಿಸುವಲ್ಲಿ ಸಹಕಾರಿ ಸಂಘಗಳು ಶ್ರಮವಹಿಸುತ್ತಿದೆ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದ್ದಾರೆ. ಸಿದ್ಧಕಟ್ಟೆಯಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ರೂ ೧ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಪ್ರಧಾನ ಆರ್ಚಕ ಪ್ರಭಾಕರ್ ಐಗಳ್ ಭೂಮಿ ಪೂಜೆ ನೆರವೇರಿಸಿದರು. ಎಪಿಎಂಸಿ ಮಾಜಿ ಸದಸ್ಯ ರತ್ನಕುಮಾರ್ ಚೌಟ, ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಗೋಪಿನಾಥ್ ರೈ, ಸಂಗಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಪೂಜಾರಿ, ಸಹಕಾರ ಇಲಾಖೆ ಅಭಿವೃದ್ಧಿ ಅಧಿಕಾರಿ ಗೋಪಾಲ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಕೇಶವ ಕಿಣಿ, ಅರಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀಧರ್ ಶೆಟ್ಟಿ, ರಾಯಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಸಂಘದ ನಿರ್ದೇಶಕರಾದ ಸಂದೇಶ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಹರೀಶ್ ಆಚಾರ್ಯ ರಾಯಿ, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಗೌಡ, ದೇವರಾಜ್ ಸಾಲಿಯಾನ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಮಾಧವ ಶೆಟ್ಟಿಗಾರ್, ಮಂದಾರತಿ ಶೆಟ್ಟಿ, ಮಾಜಿ ನಿರ್ದೇಶಕ ಜಗದೀಶ್ ಆಳ್ವ ಅಗ್ಗೊಂಡೆ, ಗುತ್ತಿಗೆದಾರ ರಾಜೇಶ್ ಸಪಲ್ಯ ಗೋವಿಂದಬೆಟ್ಟು ಮತ್ತಿತರರು ಇದ್ದರು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸ್ವಾಗತಿಸಿ, ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ವಂದಿಸಿದರು.
