ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮೊಡಂಕಾಪು ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ಯುವ ಚೈತನ್ಯ ಕಾಂಗ್ರೆಸ್ ಕಾರ್ಯಾಗಾರ ಮತ್ತು ಪದಗ್ರಹಣ’ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ವಿಧಾನಸಭೆ ಚುನಾವಣೆ ಎದುರಿಸಲು ಯುವ ಕಾಂಗ್ರೆಸ್ ಕಾರ್ಯಕರ್ತರು ಹೊಸ ಹುರುಪಿನೊಂದಿಗೆ ಸನ್ನದ್ಧರಾಗಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮೊಡಂಕಾಪು ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ಯುವ ಚೈತನ್ಯ ಕಾಂಗ್ರೆಸ್ ಕಾರ್ಯಾಗಾರ ಮತ್ತು ಪದಗ್ರಹಣ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಕೊಪ್ಪ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮತ್ತು ಬೇಬಿ ಕುಂದರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮನ್ನಾರ್ ಮನ್ನಾನ್, ಸಾಮಾಜಿಕ ಜಾಲತಾಣ ತಮಿಳುನಾಡು ಉಸ್ತುವಾರಿ ಸಾಗರ್ ಕಟೀಲ್, ರಾಜ್ಯ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಸಿಂಧ್ಯಾ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಶುಭ ಹಾರೈಸಿದರು.
ಪಾಣೆಮಂಗಳೂರು ಘಟಕ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮೊಹಮ್ಮದ್, ಮಹಿಳಾ ಘಟಕ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಕಿಸಾನ್ ಘಟಕ ಜಿಲ್ಲಾಧ್ಯಕ್ಷ ಮೋಹನ ಗೌಡ ಕಲ್ಮಂಜ, ಪ್ರಮುಖರಾದ ಮೊಹಮ್ಮದ್ ಬಡಗನ್ನೂರು, ಅಬ್ಬಾಸ್ ಆಲಿ, ಕೆ.ಮಾಯಿಲಪ್ಪ ಸಾಲ್ಯಾನ್, ಕೆ.ಪದ್ಮನಾಭ ರೈ ಮತ್ತಿತರರು ಇದ್ದರು.
