ಬಂಟ್ವಾಳ : ತಾಲ್ಲೂಕಿನ ವಾಮದೊದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೃಷಿ ಇಲಾಖೆ ವತಿಯಿಂದ ಬೆಳೆ ಸಮೀಕ್ಷೆ ಮತ್ತು ರೈತರ ಮಕ್ಕಳ ವಿದ್ಯಾರ್ಥಿ ವೇತನ ಬಗ್ಗೆ ಮಾಹಿತಿ ಕಾರ್ಯಕ್ರಮ ಗುರುವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೃಷಿ ಅಧಿಕಾರಿ ನಂದನ್ ಶೆಣೈ, ಕಾಲೇಜಿನ ಪ್ರಾಂಶುಪಾಲ ಪ್ರೊ.ಹರಿಪ್ರಸಾದ್ ಬಿ.ಶೆಟ್ಟಿ, .ಪ್ರೊ.ದುರ್ಗಾಪ್ರಸಾದ್ ಕೆ. ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಇದ್ದರು.
