ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಈಚೆಗೆ ಬೆಂಗಳೂರಿನಲ್ಲಿ ಹೇಳಿರುವ ‘ಕಾಂಗೆಸ್ ಪಕ್ಷವನ್ನು ಹಿಂದುಳಿದ ವರ್ಗ ದೂರ ಮಾಡುತ್ತಿದ್ದಾರೆ’ ಎಂಬ ಸುಳ್ಳು ಹೇಳಿಕೆ ಹಾಸ್ಯಾಸ್ಪದ ಮತ್ತು ಹಿಂದುಳಿದ ಸಮಾಜವನ್ನು ಅವಮಾನಗೊಳಿಸಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಕೀಲ ಚಂದ್ರಶೇಖರ ಪೂಜಾರಿ ಆರೋಪಿಸಿದ್ದಾರೆ. ಈ ಜಿಲ್ಲೆಯಲ್ಲಿ ಗೆದ್ದ ಒಟ್ಟು ೫ ಕ್ಷೇತ್ರಗಳ ಪೈಕಿ ೪ ಮಂದಿ ಬಂಟರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ೭ ಕ್ಷೇತ್ರಗಳ ಪೈಕಿ ಇಬ್ಬರು ಬಂಟರಿಗೆ ಟಿಕೆಟ್ ನೀಡಿದ್ದಾರೆ.

ಅವಿಭಜಿತ ಜಿಲ್ಲೆಯಲ್ಲಿ ಬಹುಸಂಖ್ಯಾತರಾಗಿ ಗುರುತಿಸಿಕೊಂಡ ಬಿಲ್ಲವರಿಗೆ ಕೇವಲ ಎರಡು ಸ್ಥಾನ ನೀಡಿರುವ ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆ ಉಳಿದಿಲ್ಲ ಎಂದು ಅವರು ಟೀಕಿಸಿದ್ದಾರೆ.

By suddi9

Leave a Reply

Your email address will not be published. Required fields are marked *