ಕೈಕಂಬ : ಗುರುಪುರ ಗ್ರಾಮ ಪಂಚಾಯತ್‌ನ ೨೦೨೦-೨೧ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಸಭಾಗೃಹದಲ್ಲಿ ಮಂಗಳವಾರ ನಡೆಯಿತು. ಪಂಚಾಯತ್ ಅಧ್ಯಕ್ಷ ಯಶವಂತ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದಕಜಿಪಂ ಉಪ ಕಾರ್ಯದರ್ಶಿ ಕೆ ಆನಂದ ಕುಮಾರ್ ನೋಡೆಲ್ ಅಧಿಕಾರಿಯಾಗಿದ್ದರು.
ಆಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ಇನ್ನೂ ಕಂತಿನ ಹಣ ಸಂದಾಯವಾಗಿಲ್ಲ. ಎನ್‌ಆರ್‌ಇಜಿ ಯೋಜನೆಯಲ್ಲಿ ಸಾಮಗ್ರಿ ಖರೀದಿ ಹಣ ಮಂಜೂರಾಗಿಲ್ಲ ಎಂದು ಸದಸ್ಯರು ಹೇಳಿದಾಗ, ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.
ರಸ್ತೆಗಳಲ್ಲಿ ಅಳವಡಿಸಿರುವ ಬೀದಿದೀಪಗಳಿಗೆ ಹೆಚ್ಚುವರಿ ವಿದ್ಯುತ್ ಲೈನ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯೂ ಕೇಳಿ ಬಂತು. ಪಿಡಿಒ ಅಬೂಬಕ್ಕರ್ ಸ್ವಾಗತಿಸಿ, ಪ್ರಸ್ತಾವಿಸಿದರು. ಕಾರ್ಯದರ್ಶಿ ಅಶೋಕ್ ಲೆಕ್ಕಪತ್ರ ಮಂಡಿಸಿದರು. ಪಂಚಾಯತ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
