ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರಾಷ್ಟಿಯ ಹೆದ್ದಾರಿ ಬಳಿ ಖಾಸಗಿ ಬಸ್ ನಿಲ್ದಾಣದ ಇಳಿಜಾರು ರಸ್ತೆ ಗೆ ಡಿವೈಎಸ್ಪಿ ವೆಲೆಂಟೈನ್ ಡಿಸೋಜ ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು.
ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಬಳಿ ಖಾಸಗಿ ಬಸ್ ನಿಲ್ದಾಣ ಸಂಪರ್ಕಿಸುವ ಇಳಿಜಾರು ರಸ್ತೆ ಅಪಾಯಕಾರಿಯಾಗಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಡಿವೈಎಸ್ಪಿ ವೆಲೆಂಟೈನ್ ಡಿಸೋಜ ಅವರು ಗುತ್ತಿಗೆದಾರರಿಗೆ ಮಂಗಳವಾರ ಸೂಚಿಸಿದ್ದಾರೆ.
ಈ ಇಳಿಜಾರು ರಸ್ತೆಯಲ್ಲಿ ಸಂಚರಿಸುವ ಹಲವಾರು ಮಂದಿ ವಯೋವೃದ್ಧರು ಸಹಿತ ಮಕ್ಕಳು ಮತ್ತು ಮಹಿಳೆಯರು ಕಾಲು ಜಾರಿ ರಸ್ತೆಗೆ ಪದೇ ಪದೇ ಉರುಳಿ ಬೀಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಈ ಸಮಸ್ಯೆ ಎದುರಾಗಿದ್ದರೂ ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ. ಈ ಬಗ್ಗೆ ಗುತ್ತಿಗೆದಾರರು ರಸ್ತೆ ದುರಸ್ತಿಗೊಳಿಸುವ ಮೂಲಕ ಪಾದಚಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವಿಶ್ವನಾಥ ಚೆಂಡ್ತಿಮಾರ್ ಆಗ್ರಹಿಸಿದ್ದರು. ಇಲ್ಲಿನ ಹೆದ್ದಾರಿ ವಿಸ್ತರಣೆ ಗುತ್ತಿಗೆದಾರರನ್ನು ಮಂಗಳವಾರ ಕರೆಸಿದ ಡಿವೈಎಸ್ಪಿ ವೆಲೈಂಟೈನ್ ಡಿಸೋಜ ಇಳಿಜಾರು ರಸ್ತೆ ಸರಿಪಡಿಸುವಂತೆ ಸೂಚಿಸಿದರು.
