Published On: Tue, Oct 12th, 2021

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷರಾಗಿ ಇಕ್ಬಾಲ್ ಮಾರಿಪಳ್ಳ ನೇಮಕ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇಕ್ಬಾಲ್ ಸುಜೀರ್ ಅವರನ್ನು ನೇಮಿಸಲಾಗಿದೆ. ಶಾಸಕ ಯು.ಟಿ.ಖಾದರ್ ಅವರ ಶಿಫಾರಸ್ಸಿನಂತೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ ಅವರ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಅವರು ಈ ನೇಮಕ ಆದೇಶ ಹೊರಡಿಸಿದ್ದಾರೆ.WhatsApp Image 2021-10-12 at 3.04.19 PM
ಮಂಗಳವಾರ ಮಂಗಳೂರು – ಮಲ್ಲಿಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಕ್ಬಾಲ್ ಸುಜೀರ್ ಅವರಿಗೆ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಅವರು ನೇಮಕ ಆದೇಶ ಪತ್ರ ಹಸ್ತಾಂತರಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಂತಿಯಾಝ್ ತುಂಬೆ, ಉಪಾಧ್ಯಕ್ಷ ಮಜೀದ್ ಪೇರಿಮಾರ್, ಕಾರ್ಯದರ್ಶಿ ಕೆ.ಎಂ.ಅಶ್ರಫ್ ಮಲ್ಲಿ ಮೊದಲಾದವರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter