ಕೈಕಂಬ : ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ನಿವಾಸಿ ಬಿಜೆಪಿ ಮುಖಂಡ ಪ್ರಕಾಶ್ ಬೆಳ್ಳೂರು ಅವರ ಮನೆಗೆ ನುಗ್ಗಿ ತಲವಾರು ಬೀಸಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು. ಘಟನೆಯಲ್ಲಿ ಪ್ರಕಾಶ್ ಗಂಭೀರ ಗಾಯಗೊಂಡು  ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. WhatsApp Image 2021-10-27 at 9.41.53 AM

ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ ನಡೆದಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಂಘಟನೆಯ ಕಾರ್ಯಕರ್ತರಿಂದಲೇ ಕೊಲೆ ಯತ್ನ ನಡೆದಿದೆ ಎನ್ನಲಾಗಿದೆ.

ಬಿಜೆಪಿ ಅಮ್ಮಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಇವರ ಮೇಲೆ ಸಂಘಟನೆಯ ಕಾರ್ಯಕರ್ತರು ತಲವಾರು ಸಹಿತ ಮನೆಗೆ ನುಗ್ಗಿ ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ತಡೆಯಲು ಬಂದ ಪ್ರಕಾಶ್ ಅವರ ತಾಯಿ ಮತ್ತು ಅಣ್ಣನಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದು, ಗಲಭೆಯ ಸಂದರ್ಭದಲ್ಲಿ  ಜನ ಸೇರಿದ್ದನ್ನು ಕಂಡು ಆರೋಪಿಗಳು ಪರಾರಿ ಆಗಿದ್ದಾರೆ ಎನ್ನಲಾಗಿದೆ. ಮಾರಣಾಂತಿಕ ದಾಳಿಗೊಳಗಾದ ಪ್ರಕಾಶ್ ಬೆಳ್ಳೂರು ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *