ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಒಡಿಯೂರು ಶ್ರೀಗಳ ಷಷ್ಠ್ಯಬ್ಧ ಸಂಭ್ರಮದ ಸರಣಿ ಕಾರ್ಯಕ್ರಮಗಳ ಸಮಾರೋಪ ಕಾರ್ಯಕ್ರಮ ಮತ್ತು ಸಾವಯವ ಕೃಷಿ ಮಾಹಿ ಕಾರ್ಯಕ್ರಮ ಇದೇ ೩೧ರಂದು ಬೆಳಿಗ್ಗೆ ೧೧ ಗಂಟೆಗೆ ಶ್ರೀ ರಾಮ ಮಂದಿರದ ಸಭಾಂಗಣದಲ್ಲಿ ನಡೆಯಲಿದೆ.
ಅಂದು ಸಾವಯವ ಕೃಷಿ ಬಗ್ಗೆ ಬೆಂಗಳೂರಿನ ಕೃಷಿ ವಿಜ್ಞಾನಿ ಡಾ.ಕೆ.ಆರ್.ಹುಲ್ಲುನಾಚೇಗೌಡ ಮತ್ತು ಔಷಧಿ ಸಿಂಪಡಣೆ ಬಗ್ಗೆ ಬಾಲಸುಬ್ರಹ್ಮಣ್ಯ ಎಚ್.ಎಂ.ಹಾಸನ ಇವರು ಮಾಹಿತಿ ಮತ್ತು ಪ್ರ‍್ರಾತ್ಯಕ್ಷಿಕೆ ನೀಡುವರು. ಆರ್ ಎಸ್ ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ , ಒಡಿಯೂರು ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ತಿಳಿಸಿದ್ದಾರೆ.
