ಬಂಟ್ವಾಳ: ಸಮಾಜದ ಆಗು ಹೋಗುಗಳನ್ನು ಜನರಿಗೆ ತಿಳಿಸುತ್ತಾ, ಸಮಾಜದ ಕೈಗನ್ನಡಿಯಾಗಿ ಕೆಲಸ ಮಾಡುವ ಪತ್ರಕರ್ತರನ್ನು ಗುರುತಿಸುವ ಕಾರ್ಯ ಮಾಡಿದ ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿಯ ಕಾರ್ಯ ಅಭಿನಂದನೀಯ ಎಂದು ನಾಮ ನಿರ್ದೇಶಿತ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಹೇಳಿದರು.WhatsApp Image 2021-10-28 at 4.34.27 PM

ಅವರು ಬಿ.ಸಿ.ರೋಡು ಸಿಟಿ ಇದರ ವತಿಯಿಂದ ಬಿ.ಸಿ.ರೋಡಿನ ರೋಟರಿ ಸಭಾ ಭವನದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಬಂಟ್ವಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪತ್ರಕರ್ತರನ್ನು ಸನ್ಮಾನಿಸಿ ಮಾತನಾಡಿದರು. ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿಯ ಅಧ್ಯಕ್ಷ ಸತೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.WhatsApp Image 2021-10-28 at 4.34.27 PM (1)

ಜಿಎಸ್‌ಆರ್ ಪದ್ಮನಾಭ ರೈ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಕರ್ತರಾದ ಸಂದೀಪ್ ಸಾಲ್ಯಾನ್ ಹಾಗೂ ಹರೀಶ್ ಮಾಂಬಾಡಿ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯದರ್ಶಿ ಪಲ್ಲವಿ ಕಾರಂತ್ ವಂದಿಸಿದರು. ಸದಸ್ಯರಾದ ಟಿ.ಶೇಷಪ್ಪ ಮೂಲ್ಯ ಹಾಗೂ ಸುಪ್ರಿಯಾ ರಮೇಶ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *