ಮಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿಯಲ್ಲಿ ಬಿಜೆಪಿಗೆ ಗೆಲುವು, ಹಾನಗಲ್ನಲ್ಲಿ ಕಾಂಗ್ರೆಸ್ಗೆ ಜಯಗಳಿಸಿದೆ. ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಹಾಗೂ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವು ಸಾಧಿಸಿದ್ದಾರೆ. ಹಾನಗಲ್ನಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನರ್, ಕಾಂಗ್ರೆಸ್ ನಿಂದ
ಶ್ರೀನಿವಾಸ್ ಮಾನೆ, ಜೆಡಿಎಸ್ನಿಂದ ನಿಯಾಜ್ ಶೇಖ್ ಸ್ಪರ್ಧಿಸಿದ್ದರು. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್ನಿಂದ ನಾಜಿಯಾ ಅಂಗಡಿ, ಕಾಂಗ್ರೆಸ್ ಪಕ್ಷದಿಂದ ಅಶೋಕ್ ಮನಗೂಳಿ ಕಣಕ್ಕಿಳಿದಿದ್ದರು. ಬೆಳಿಗ್ಗೆ ೮ರಿಂದ ಮತ ಎಣಿಕೆ ಕಾರ್ಯ ಆರಂಭವಾಗಿತ್ತು. ಒಂದೆಡೆ ಬಿಜೆಪಿ ಹಾಗೂ ಮತ್ತೊಂದೆಡೆ ಕಾಂಗ್ರೆಸ್ ಗೆಲುವು ಸಾದಿಸಿದೆ.
