ಮಂಗಳೂರು: ಸಿಂದಗಿ, ಹಾನಗಲ್ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಸಿಂದಗಿಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವಾಗಿದೆ. ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದು ಸಂಘಟಿತ ಪ್ರಯತ್ನದ ಫಲ. ಹಾನಗಲ್​ನಲ್ಲಿ ಸಣ್ಣಮಟ್ಟದ ಸೋಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.832858451-650x488 copyಮಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸೋಲಿಗೆ ತಲೆಬಾಗುತ್ತೇವೆ. ಮುಂದಿನ ಚುನಾವಣೆಗೆ ಇನ್ನಷ್ಟು ಹೋರಾಟ ಮಾಡುತ್ತೇವೆ. ಹಾನಗಲ್ ಕ್ಷೇತ್ರ ದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ. ಅಲ್ಲಿನ ಮತದಾರ ಆಮಿಷಕ್ಕೆ ಒಳಗಾಗಿದ್ದಾನೆ. ಈ ಹಿನ್ನೆಲೆಯಲ್ಲಿ ನಮಗೆ ಹಿನ್ನಡೆಯಾಗಿದೆ ಎಂದರು.

By suddi9

Leave a Reply

Your email address will not be published. Required fields are marked *