ಕಾಬೂಲ್: ಅಫ್ಘಾನಿಸ್ತಾನದ ಮಿಲಿಟರಿ ಆಸ್ಪತ್ರೆಯಲ್ಲಿ ಸಂಭವಿಸಿದ ಅವಳಿ ಸ್ಫೋಟದಲ್ಲಿ ಸುಮಾರು ೧೫ ಮಂದಿ ಮೃತಪಟ್ಟಿದ್ದಾರೆ. ೩೪ ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಮೂಲಗಳು ತಿಳಿಸಿವೆ.
೪೦೦ ಹಾಸಿಗೆಗಳಿರುವ ಸರ್ದಾರ್ ಮೊಹಮ್ಮದ್ ದಾವುದ್ ಖಾನ್ ಆಸ್ಪತ್ರೆ ಬಳಿ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯೀದ್ ಖೋಸ್ಟಿ ಟ್ವೀಟ್ ಮಾಡಿದ್ದಾರೆ. 
