ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿವಾಹಿತ ಮಹಿಳೆಯೊಬ್ಬಳು ಯುವಕನೊಂದಿಗೆ ನಾಪತ್ತೆಯಾಗಿದ್ದು, ಮೂಡುಬಿದಿರೆ ಪೊಲೀಸರು ಪತ್ತೆಹಚ್ಚಿದ್ದಾರೆ. ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.WhatsApp Image 2021-11-06 at 7.35.42 AM

ಕಾರ್ಕಳ ತಾಲೂಕಿನ ಶಿರ್ಲಾಲಿನ ವಿವಾಹಿತೆ, ಎರಡು ಮಕ್ಕಳ ತಾಯಿ ಮೂರು ದಿನಗಳ ಹಿಂದೆ ಮೂಡುಬಿದಿರೆ ತಾಲೂಕಿನ ಬೆಳುವಾಯಿಯಲ್ಲಿರುವ ತಮ್ಮ ಮನೆಗೆ ಬಂದಿದ್ದು, ಈ ವೇಳೆ ಶಿರ್ಲಾಲಿನ ಸಂದೀಪ್ ಆಚಾರ್ಯ ಎಂಬಾತನೊಂದಿಗೆ ಪರಾರಿಯಾಗಿದ್ದಳು ಎನ್ನಲಾಗಿದೆ.

ಇಬ್ಬರನ್ನು ಪತ್ತೆ ಹಚ್ಚಿರುವ ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಂಡನ ಮನೆಗೆ ಹೋಗಲು ಒಪ್ಪದ ಮಹಿಳೆಯನ್ನು ಪ್ರಜ್ಞಾ ಕೌನ್ಸಿಲಿಂಗ್ ಕೇಂದ್ರಕ್ಕೆ ಸೇರಿಸಲಾಗಿದೆ.

By suddi9

Leave a Reply

Your email address will not be published. Required fields are marked *