ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಅಕಾಡೆಮಿ ಫಾರ್ ಎಕ್ಸಲೆನ್ಸ್ ವತಿಯಿಂದ ಆಳ್ವಾಸ್ ರಿಮೋಟ್ ಎಜ್ಯುಕೇಶನ್ ಸಿಸ್ಟಮ್ (ಎಆರ್‌ಇಎಸ್)ಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಚಾಲನೆ ನೀಡಿದರು.f9487a96-42ac-49b6-a695-93aa99dfe934

ಜಾಗತಿಕವಾಗಿ ಕಾಡಿದ ಸಾಂಕ್ರಾಮಿಕ ರೋಗವು ಶೈಕ್ಷಣಿಕ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರಿದೆ. ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಹಾಗೂ ಇತರ ಕೋರ್ಸ್ಗಳಿಗೆ ಸರಿಯಾದ ತರಬೇತಿ ಸಿಗುತ್ತಿಲ್ಲ ಎನ್ನುವ ಕಾರಣದಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನುರಿತ ಶಿಕ್ಷಕರು ಆನ್ಲೈನ್ ಮುಖೇನ 8ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಫೌಂಡೇಶನ್ ಕೋರ್ಸ್, ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ಕ್ರಾಶ್ ಕೋರ್ಸ್ ಹಾಗೂ ಪ್ರಶ್ನೋತ್ತರ ಮಾಲಿಕೆಯನ್ನು ಆಳ್ವಾಸ್ ರಿಮೋಟ್ ಎಜುಕೇಶನ್ ಸಿಸ್ಟಮ್ ಯೋಜನೆಯಲ್ಲಿ ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು.

ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ, ಪಿಯುಸಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಸದಾಕತ್, ಗಣಿತ ಶಿಕ್ಷಕಿ ವಿದ್ಯಾ, ಎಆರ್‌ಇಎಸ್ ಸಂಯೋಜಕ ಪ್ರೀತಮ್ ಕ್ಯಾಸ್ಟಲಿನೊ ಉಪಸ್ಥಿತರಿದ್ದರು.ಕನ್ನಡ ಪ್ರಾಧ್ಯಾಪಕ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *