ಕೈಕಂಬ: ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆನ.೭ ರಂದು ಭಾನುವಾರ ಅಡ್ಡೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪಲ್ಲಿಪಾಡಿ ಹೊಸಮನೆ ನಿವಾಸಿ ತಿಮ್ಮಪ್ಪ ಆಳ್ವ (೫೨) ಎಂದು ಗುರುತಿಸಲಾಗಿದೆ.
ಮೃತರು ಇಲೆಕ್ತ್ರಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಇಂದು ಅಡ್ಡೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ವಯರಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕರಂಟ್‌ಶಾಕ್ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ ಅವರು ಧರ್ಮಸ್ಥಳ ಸ್ವಸಹಾಯ ಸಂಘದಲ್ಲಿ ಗುರುತಿಸಿಕೊಂಡ ಅವರು ಎಲ್ಲರೊಂದಿಗೆ ಆತ್ಮೀಯರಾಗಿದ್ದರು. ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
