ವಿಟ್ಲ : ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ| ಕೆ ಬಿ ರಾಜಾರಾಂ, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮಮ್ಮದ್, ಡಿ ಸಿ ಸಿ ಕಾರ್ಯದರ್ಶಿಗಳಾದ ಮುರಳೀಧರ ರೈ ಮಡಂದಬೆಟ್ಟು, ಪ್ರವೀಣ್ ಚಂದ್ರ ಆಳ್ವ ಮತ್ತು ಉಮಾನಾಥ ಶೆಟ್ಟಿ, ಬ್ಲಾಕ್ ಕಾಂಗ್ರಸ್ ವಕ್ತಾರ ರಮಾನಾಥ ವಿಟ್ಲ, ಉಪಾಧ್ಯಕ್ಷೆ ಸುನಿತಾ ಕೋಟ್ಯಾನ್, ವಿಟ್ಲ ನಗರ ಅಧ್ಯಕ್ಷ ವಿ ಕೆ ಎಂ ಅಶ್ರಫ್, ಕಾರ್ಮಿಕ ಘಟಕದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ ಹಾಗೂ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.
