ಮುಂಬಯಿ : ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನ.08ರಂದು ಸೋಮವಾರ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.Pejawara @ Prime Minister 1ತಮ್ಮ ಗುರುವರ್ಯರಾದ ಕೀರ್ತಿಶೇಷ ಶ್ರೀವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಲು ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಈ ಭೇಟಿ ನಡೆಸಿದ್ದು, ಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಮೋದಿ ಅವರು ಶ್ರೀ ವಿಶ್ವೇಶತೀರ್ಥರನ್ನು ವಿಶೇಷವಾಗಿ ಸ್ಮರಿಸಿದರು.Pejawara @ Prime Minister 2

ರಾಮಮಂದಿರ ನಿರ್ಮಾಣ ಕಾರ್ಯಗಳ ಪ್ರಗತಿಯ ಕುರಿತೂ ಈರ್ವರೂ ಸಮಾಲೋಚನೆಗೈದರು. ನರೇಂದ್ರ ನೋದಿಯವರಿಗೆ ಯಕ್ಷಗಾನದ ಕೇದಗೆ ಮುಂಡಾಸಿನ ಕಿರೀಟ ತೊಡಿಸಿ ಜರತಾರಿ ಶಾಲುಬ, ಬೆಳ್ಳಿತಟ್ಟೆಯಲ್ಲಿ ಉಡುಪಿ ಶ್ರೀ ಕೃಷ್ಣನ ಗಂಧ, ನಿರ್ಮಾಲ್ಯ ತುಳಸಿ ನೀಡಿ ಆಶೀರ್ವದಿಸಿದರು. ಮೋದಿಯವರು ಉಡುಪಿ ಕೃಷ್ಣನಿಗೆ ಕೈಮುಗಿಯುವ ಭಂಗಿಯ ಉಡುಪಿಯ ಚಿತ್ರಕಲಾವಿದೆ ವಸಂತಲಕ್ಷ್ಮೀ ಹೆಬ್ಬಾರ್ ರಚಿಸಿದ ಸುಂದವಾ ದ ತೈಲಚಿತ್ರ ಹಾಗೂ ಸಂಸ್ಕೃತ, ಕನ್ನಡ, ತುಳು ಲಿಪಿಗಳಲ್ಲಿ ನರೇಂದ್ರ ಮೋದಿಯವರ ಹೆಸರನ್ನು ಕೆತ್ತಿದ ಸ್ಮರಣಿಕೆಯನ್ನೂ ಶ್ರೀಗಳು ಪ್ರಧಾನಮಂತ್ರಿ ಅವರಿಗೆ ನೀಡಿದರು. ಈ ಭೇಟಿಯ ಬಗ್ಗೆ ಶ್ರೀಗಳು ಮತ್ತು ಪ್ರಧಾನಮಂತ್ರಿಗಳು ಅತೀವ ಸಂತಸ ವ್ಯಕ್ತಪಡಿಸಿದರು.Pejawara @ Prime Minister 3

ಉಡುಪಿ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ
ತಮ್ಮ ಪ್ರಧಾನ ಮಂತ್ರಿ ಅಧಿಕಾರದವಧಿಯಲ್ಲೇ ಉಡುಪಿ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಮೋದಿ ಅವರನ್ನು ಶ್ರೀಗಳು ಆಹ್ವಾನಿಸಿದರು. ಖಂಡಿತ ಬಂದೇ ಬರುವೆ ಚಿಂತೆ ಬೇಡ ಎಂದು ಮೋದಿಯವರು ತುಂಬ ಹರ್ಷದಿಂದಲೇ ತಿಳಿಸಿದರು .Pejawara @ Prime Minister 6

ದೇಶದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸಲು, ದೇಶಾದ್ಯಂತ ಹಿಂದೂ ಶ್ರದ್ಧಾಕೇಂದ್ರಗಳನ್ನು ಸರ್ಕಾರಿ ವ್ಯವಸ್ಥೆಯಿಂದ ಸ್ವಾಯತ್ತಗೊಳಿಸಲು, ಮಹರ್ಷಿ ವೇದವ್ಯಾಸರ ಜಯಂತಿಯನ್ನು (ಆಷಾಢ ಪೂರ್ಣಿಮಾ ಅಥವಾ ಒಂದು ನಿರ್ದಿಷ್ಟ ದಿನಾಂಕವನ್ನು ‘ತತ್ವಜ್ಞಾನ ದಿನ’ ಅಥವಾ `ಅಧ್ಯಾತ್ಮ ದಿನ’ ಎಂದು ಘೋಷಿಸಿ ಸರ್ಕಾರಿ ಆಚರಣೆಗೆ ವ್ಯವಸ್ಥೆಗೊಳಿಸಲು ಹಾಗೂ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದು ಎಂಬ ನಾಲ್ಕು ಅಪೇಕ್ಷೆಗಳನ್ನು ಲಿಖಿತವಾಗಿ ನೀಡಿದರು. ಈ ಬಗ್ಗೆಯೂ ಗಮನಹರಿಸುವುದಾಗಿ ಮೋದಿಯವರು ತಿಳಿಸಿದರು.Pejawara @ Prime Minister 7

ಈ ಸಂದರ್ಭದಲ್ಲಿ ಶ್ರೀ ಪೇಜಾವರ ಮಠದ ದಿವಾನ ಎಂ.ರಘುರಾಮಾಚಾರ್ಯ, ಡಿ.ಪಿ.ಅನಂತ್, ಸಾಮಾಜಿಕ ಕಾರ್ಯಕರ್ತ ಶ್ರೀಗಳ ಆಪ್ತ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.Pejawara @ Prime Minister 5

By suddi9

Leave a Reply

Your email address will not be published. Required fields are marked *