ಬಂಟ್ವಾಳ:ತಾಲ್ಲೂಕಿನ ನೈನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ‘ಕ್ರೀಡಾಕೂಟ’ವು ನ.7ರಿಂದ 8ರತನಕ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸದ ನಳಿನ್ ಕುಮಾರ್ ಕಟೀಲು ಇವರು ಕ್ರೀಡಾಕೂಟ ಉದ್ಘಾಟಿಸುವರು.
ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕಿ ಟಿ.ಶಕುಂತಳಾ ಶೆಟ್ಟಿ, ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್, ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಮತ್ತಿತರ ಗಣ್ಯರು ಭಾಗವಹಿಸಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಇವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
