Published On: Thu, Nov 18th, 2021

ಕುಲಶೇಖರ ವೀರನಾರಾಯಣ ದೇವಸ್ಥಾನದಲ್ಲಿ ಗೋಪೂಜೆ ಭಜನೆ ಸತ್ಯನಾರಾಯಣ ಮಹಾಪೂಜೆ ಅನ್ನಸಂತರ್ಪಣೆ. ವೀರನಾರಾಯಣ ದೇವಸ್ಥಾನ ಕುಲಾಲರ ಅಸ್ಮಿತೆ: ಮಯೂರ್ ಉಳ್ಳಾಲ್

ಮಂಗಳೂರು: ಕುಲಶೇಖರ ವೀರನಾರಾಯಣ ದೇವಸ್ಥಾನ ಜೀರ್ಣೋದ್ಧಾರದ ಪ್ರಕ್ರಿಯೆ ಪ್ರಾರಂಭಗೊಂಡಿದ್ದು ಆ ಪ್ರಯುಕ್ತ ನವೆಂಬರ್ 14 ರಂದು ಭಾನುವಾರ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ವೀರನಾರಾಯಣ ದೇವಸ್ಥಾನದ ಆಡಳಿತ ಮಂಡಳಿ ಜಂಟಿಯಾಗಿ ಭಜನೆ ಗೋಪೂಜೆ ಸತ್ಯನಾರಾಯಣ ಮಹಾಪೂಜೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.IMG-20211114-WA0052
ಬೆಳಿಗ್ಗೆ ದೇವಸ್ಥಾನದ ತಂತ್ರಿ ಗಳಾಗಿರುವ ಶ್ರೀಹರಿ ಉಪಾಧ್ಯಾಯರು ಅವರ ಮಾರ್ಗದರ್ಶನದಂತೆ ಪ್ರಧಾನ ಅರ್ಚಕರು ಜನರ್ಧನ್ ಭಟ್ ಅವರು ಶ್ರೀದೇವರಿಗೆ ವಿಶೇಷ ಪೂಜೆ ನಡೆಸಿದರು ಆ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲ ಸಂಘದ ಅಧ್ಯಕ್ಷ ಮಯೂರ ಉಳ್ಳಾಲ್ ದಂಪತಿಗಳಿಂದ ಗೋ ಪೂಜೆ ನೆರವೇರಿತು.IMG-20211114-WA0057
ಜಿಲ್ಲಾ ಕುಲಾಲ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ.ಎ ಸಾಲ್ಯಾನ್ ಮತ್ತು ಪದಾಧಿಕಾರಿಗಳು ಸದಸ್ಯರು ಹಾಗೂ ವೀರನಾರಾಯಣ ದೇವಸ್ಥಾನದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಮನೋಜ್ ಮತ್ತು ಪದಾಧಿಕಾರಿಗಳು ಸದಸ್ಯರು ಭಜನೆ ನಡೆಸಿದರು ನಂತರ ಶ್ರೀ ಸತ್ಯನಾರಾಯಣ ಮಹಾಪೂಜೆ ಅನ್ನಸಂತರ್ಪಣೆ ನೆರವೇರಿತುIMG-20211114-WA0060ಪೂಜೆ ನಡೆದ ಬಳಿಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರು ಮಯೂರ   ಉಳ್ಳಾಲ್ ಮಾತನಾಡುತ್ತಾ ವೀರನಾರಾಯಣ ಕ್ಷೇತ್ರ ಸಮಸ್ತ ಹಿಂದೂ ಬಾಂಧವರ ಕ್ಷೇತ್ರವಾಗಿದೆ ಆದರೆ ಇತಿಹಾಸದಿಂದಲೇ ಕ್ಷೇತ್ರವನ್ನು ಕುಲಾಲ ಸಮಾಜ ಬಂಧುಗಳು ಆಡಳಿತವನ್ನು ನಡೆಸುತ್ತ ಬಂದಿದ್ದಾರೆ ಮುಂದೇವು ನಡೆಸುತ್ತೇವೆ.IMG-20211114-WA0074
ಕ್ಷೇತ್ರ ಜೀರ್ಣೋದ್ಧಾರ ಆಗಬೇಕೆಂದು ಸಂಕಲ್ಪ ಮಾಡಿದ್ದೇವೆ ಮುಂದಿನ ತಿಂಗಳು ಜೀರ್ಣೋದ್ಧಾರದ ದೊಡ್ಡ ಮಟ್ಟಿನ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ ಅದಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕುಲಾಲ ಸಮಾಜ ಬಾಂಧವರು ಸೇರುವವರು ಇದ್ದಾರೆ.  ಕ್ಷೇತ್ರದಲ್ಲಿ ಕೆಲವೇ ದಿನಗಳ ಹಿಂದೆ ಭಜನೆ ಸತ್ಯನಾರಾಯಣ ಪೂಜೆ ಗೋಪೂಜೆ ಮಾಡಬೇಕೆಂದು ನಿರ್ಧಾರ ಮಾಡಿದ್ದೆವು ಅದಕ್ಕೆ ಸಾವಿರ ಸಂಖ್ಯೆಯಲ್ಲಿ ಸಮಾಜಬಾಂಧವರು   ಸೇರಿಕೊಂಡಿರುವುದು ಅಭಿಮಾನ ತಂದಿದೆ .ದೇಶವಿದೇಶಗಳಿಂದ ಸಮಾಜಬಾಂಧವರು ಕ್ಷೇತ್ರದ ಮೇಲೆ ಭಕ್ತಿಯಿಂದ ಸಹಕಾರವನ್ನು ನೀಡುವ ಭರವಸೆ ನೀಡಿದ್ದಾರೆ.IMG-20211114-WA0076
ವೀರನಾರಾಯಣ ಕ್ಷೇತ್ರ ಕುಲಾಲರ ಅಸ್ಮಿತೆ ಎಂದು ನುಡಿದರು ವೇದಿಕೆಯಲ್ಲಿ ಪುರುಷೋತ್ತಮ್ ಕುಲಾಲ್, ಕಲ್ಬಾವಿ ಆಡಳಿತ ಮೊಕ್ತೇಸರರು.  ಶ್ರೀಕ್ಷೇತ್ರ ವೀರನಾರಾಯಣ ಎ. ದಾಮೋದರ ಅಧ್ಯಕ್ಷರು ಜೀರ್ಣೋದ್ಧಾರ ಸಮಿತಿ ಬಿ ಪ್ರೇಮಾನಂದ ಕುಲಾಲ್ ಕಾರ್ಯಧ್ಯಕ್ಷರು ಶ್ರೀ ವೀರನಾರಾಯಣ ಸೇವಾ ಟ್ರಸ್ಟ್ ಸುಂದರ ಕುಲಾಲ್ ಶಕ್ತಿನಗರ ಅಧ್ಯಕ್ಷರು ವೀರನಾರಾಯಣ ಸೇವಾ ಸಮಿತಿ ದೇವಸ್ಥಾನದ ಮಹಿಳಾ  ವಿಭಾಗದ ಕಾರ್ಯಧ್ಯಕ್ಷೆ ಗೀತಾ ಮನೋಜ್, ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಸಾಲ್ಯಾನ್  ಹಾಗೂ ದಯಾನಂದ ಅಡ್ಯಾರ್, ಎಂಪಿ ಬಂಗೇರ, ರಾಮಣ್ಣ ಉಪ್ಪಿನಂಗಡಿ, ಪುಂಡರೀಕಾಕ್ಷ, ಭಾಸ್ಕರ್ ಪೆರುವಾಯಿ ಸುರೇಶ್ ಕುಲಾಲ್ ಬಂಟ್ವಾಳ, ಸುರೇಶ್ ಕುಲಾಲ್ ಮಲಾಲಿ, ಬಿಜೆಪಿಯ ಹಿರಿಯ ನಾಯಕಿ ರೂಪಾ ಡಿ ಬಂಗೇರ,  ನಾಗೇಶ್ ಕುಲಾಲ್ ಕುಲಾಯಿ, ಕಿರನ್ ಅಟ್ಲೂರು, ಉದ್ಯಮಿ ಅನಿಲ್ ದಾಸ್, ಸುರೇಶ್ ಕುಲಾಲ್ ಮಂಗಳದೇವಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನವೀನ್ ಕುಲಾಲ್ ಪುತ್ತೂರು ನಿರೂಪಿಸಿದರು ಪ್ರವೀಣ್ ಬಸ್ತಿ ವಂದನಾರ್ಪಣೆಗೈದರು ಬೆಳಿಗ್ಗಿನಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter